ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯಲ್ಲಿ ಹಾಲಿನ ಡೇರಿಯಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್ ಮತ್ತು ವರ್ತೂರು ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವರ್ತೂರು ಪ್ರಕಾಶ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ವಿಠೋಬ, ಪಾಂಡುರಂಗ, ಸುಬ್ರಮಣಿ ಸೇರಿದಂತೆ ನಾಲ್ವರಿಗೆ ಚಾಕುವಿನಿಂದ ಇರಿಯಲಾಗಿದೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐದು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.