ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ.
ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ ಪತಿ ಲೋಕೇಶ್ ಮಚ್ಚಿನಿಂದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಊರಿಗಾಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಊರಿಗಾಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ,