
ಕೋಲಾರ: ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರವು ಭರವಸೆ ನೀಡಿದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಮೇ 31 ಕೊನೆಯ ದಿನ ಎಂದು ನಕಲಿ ಸಂದೇಶವನ್ನು ನಂಬಿದ ಮಹಿಳೆಯರು ಸೈಬರ್ ಕೆಫೆಗಳ ಮುಂದೆ ಸರತಿ ಸಾಲಿನಲ್ಲಿ ನಿಂತ ಘಟನೆ ನಡೆದಿದೆ.
ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೈಬರ್ ಕೆಫೆಗಳು ಮಹಿಳೆಯರಿಂದ 250 ರೂಪಾಯಿ ಶುಲ್ಕವನ್ನು ಸಂಗ್ರಹಿಸುತ್ತಿವೆ ಎಂದು ಹೇಳಲಾಗಿದೆ.
ತಹಸೀಲ್ದಾರ್ ಶ್ರೀನಿವಾಸ್, ಪೊಲೀಸ್ ಅಧಿಕಾರಿಗಳೊಂದಿಗೆ ಕೆಫೆಗಳ ಮೇಲೆ ದಾಳಿ ನಡೆಸಿ ಕೆಫೆ ಮಾಲೀಕರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ.
ಸೈಬರ್ ಕೆಫೆಗಳಲ್ಲಿ ಅಪಪ್ರಚಾರ ಮಾಡುತ್ತಿದ್ದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಕೋಲಾರ ಪೊಲೀಸ್ ಆಯುಕ್ತ ವೆಂಕಟ್ ರಾಜಾ ತಿಳಿಸಿದ್ದಾರೆ. ಇಂತಹ ಸುಳ್ಳು ಮಾಹಿತಿಗಳನ್ನು ಜನರು ನಂಬಬೇಡಿ ಎಂದು ಅವರು ಮನವಿ ಮಾಡಿದ್ದಾರೆ.