alex Certify ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ

ಕೋಲಾರ: ಹೈಸ್ಕೂಲು ವಿದ್ಯಾಭ್ಯಾಸ ಮುಗಿಸಿ ಆಗತಾನೇ ಕಾಲೇಜು ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿಯೇ ಹೆರಿಗೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೋಲಾರ ಹೊರವಲಯದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಫಸ್ಟ್ ಪಿಯು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಶೌಚಾಲಯದಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಸುದ್ದಿ ತಿಳಿದು ಸಹಪಾಠಿಗಳು, ಉಪನ್ಯಾಸಕರು ಶಾಕ್ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿನಿ ವಿಚಾರಣೆ ನಡೆಸಿದ್ದು, ಆರೋಪಿಗಾಗಿ ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...