![](https://kannadadunia.com/wp-content/uploads/2022/09/arrest-1663675557.jpg)
ಕೋಲಾರ: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರೆಸಿದ್ದಾರೆ. ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೋಲಾರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಮೀರ್ ಪಾಷಾ, ತಮೀಮ್ ಖಾನ್, ಷಹೀದ್ ಪಾಷಾ ಬಂಧಿತರು. ಬಂಧಿತರಿಂದ 20,000 ರೂ ಮೌಲ್ಯದ 5.4 ಗ್ರಾಂ ಎಂಡಿಎಂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಒಂದು ಮಾರುತಿ ಸ್ವಿಫ್ಟ್ ಕಾರು, 4 ಮೊಬೈಲ್ ಹಾಗೂ 1 ಡ್ರಾಗರ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಕೋಲಾರ ನಗರದ ಸುಲ್ತಾನ್ ತಿಪ್ಪಸಂದ್ರ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.