
ಕೋಲಾರ: ರಾಬರಿ ಪ್ರಕರಣದಲ್ಲಿ ಬಂಧಿಸಿ ಠಾಣೆಗೆ ಕರೆತಂದಿದ್ದ ಅರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆಯಿಂದ ಆರೋಪಿ ಪರಾರಿಯಾಗಿದ್ದಾನೆ. ಚಂದನ್ ಕುಮಾರ್ ಪರಾರಿಯಾಗಿರುವ ಆರೋಪಿ. ಬ್ಯಾಡಬೆಲೆ ಗ್ರಾಮದ ಬಳಿ ದರೋಡೆ ಪ್ರಕರಣದಲ್ಲಿ ಚಂದನ್ ನನ್ನು ಬಂಧಿಸಿ ಪೊಲೀಸರು ಠಾಣೆಗೆ ಕರೆತಂದಿದ್ದರು.
ಆರೋಪಿ ಚಂದನ್ ಮುಳಬಾಗಿಲು ಮೂಲದವನಾಗಿದ್ದಾನೆ. ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲೇ ಆರೋಪಿ ಪರರೈಯಾಗಿದ್ದಾನೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.