
ಕೋಲಾರ: ಬಂಡೆ ಒಡೆಯಲು ಸಿದ್ಧತೆ ನಡೆಸುತ್ತಿದ್ದಾಗ ದುರಂತ ಸಂಭವಿಸಿದ್ದು, ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೂಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಕಾರಹಳ್ಳಿಯಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ಆಂಧ್ರ ಮೂಲದ ವೆಂಕಟೇಶ್ (60) ಎಂದು ಗುರುತುಸಲಾಗಿದೆ. ಹರೀಶ್ ಹಾಗೂ ಈಶ್ವರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಕೋಲಾರ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಡೆ ಸ್ಫೋಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಏಕಾಏಕಿ ಕಲ್ಲುಬಂಡೆ ಜಾರಿ ಬಿದ್ದಿದೆ. ಘಟನಾ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.