
ಕೋಲಾರ: ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆ ಕಾಮಸಮುದ್ರ ಬಳಿ ನಡೆದಿದೆ.
ಕೋಲಾರದ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಮಸಮುದ್ರ ಗ್ರಾಮದ ನಿವಾಸಿ ಶ್ರೀನಿವಾಸಾಚಾರಿ (48) ಮೃತ ದುರ್ದೈವಿ.
ಸಾಲದ ಸುಳಿಗೆ ಸಿಲುಕಿ ಶ್ರೀನಿವಾಸಾಚಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.