alex Certify ಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್

ಕೋಲಾರ: ಮಹಿಳೆಯೊಬ್ಬರು ಮನೆಯಲ್ಲಿಯೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲಿಸರು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ನಂದಿನಿ (24) ಮೃತ ಮಹಿಳೆ. ಪತಿ ನಾಗೇಶ್ ಬಂಧಿತ ಆರೋಪಿ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ನಂದಿನಿ, ಅನಾಥ ವ್ಯಕ್ತಿ ನಾಗೇಶ್ ನನ್ನು ವಿವಾಹವಾಗಿದ್ದಳು. ಕಳೆದ ರಾತ್ರಿ ನಾಗೇಶ್ ಕುಡಿದು ಬಂದು ಪತ್ನಿ ಜೊತೆ ಜಗಳವಾಡಿದ್ದ ಎನ್ನಲಾಗಿದೆ. ಈ ವೇಳೆ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಶಂಕೆಯನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪತಿ ನಾಗೇಶ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...