
ಕೋಲಾರ: ಮಹಿಳೆಯೊಂದಿಗೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ಅನಸೂಯ (35) ಹಾಗೂ ವಿಜಯ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡವರು. ಇಬ್ಬರೂ ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅನುಸೂಯಾಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ ಅವಿವಾಹಿತ ಯುವಕ ವಿಜಯ್ ಕುಮಾರ್ ಜೊತೆ ಅಕ್ರಮ ಸಂಬಂಧವಿತ್ತು. ಇಬ್ಬರೂ ಎರಡು ತಿಂಗಳ ಹಿಂದೆ ಊರು ಬಿಟ್ಟು ಪರಾರಿಯಾಗಿದ್ದರು. ಈಗ ಮತ್ತೆ ಗ್ರಾಮಕ್ಕೆ ವಾಪಾಸ್ ಆಗಿ ಇಬ್ಬೂ ಒಂದೇ ಮರಕ್ಕೆ ಜೊತೆಯಾಗಿ ನೇಣಿಗೆ ಕೊರಳೊಡ್ಡಿದ್ದಾರೆ.
ರಾಯಲ್ಪಾಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.