ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹಾಗೂ ಮತ್ತೋರ್ವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.
ಕರ್ತವ್ಯಲೋಪ ಆರೋಪದ ಮೇಲೆ ಎಸ್ ಪಿ ಎಂ.ನಾರಾಯಣ್ ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ. ಮಾಲೂರು ಠಾಣೆ ಎ ಎಸ್ ಐ ಪ್ರಕಾಶ್, ಬೀಟ್ ಕಾನ್ಸ್ ಟೇಬಲ್ ಗಳಾದ ರಾಮಪ್ಪ, ಅನಂತಮೂರ್ತಿ, ಡಿಎ ಆರ್ ಪೇದೆ ಅನಿಲ್ ಕುಮಾರ್, ಶ್ರೀನಿವಾಸಪುರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಈಶ್ವರಪ್ಪ, ಮುಖ್ಯಪೇದೆ ದೇವರಾಜ್ ರೆಡ್ಡಿ, ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.