ಕೋಲಾರ: ಕೋಲಾರದ ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿದ ಪ್ರಕರಣ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಶಿಕ್ಷಕರು ಹೊಡೆದು ಚಿತ್ರ ಹಿಂಸೆ ಕೊಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂರೆ ವಸತಿ ಶಾಲೆಯ ಪ್ರಾಂಶುಪಾಲರು ಸೇರಿ ನಾಲ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಯಲುವಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲೆ ಭರತಮ್ಮ, ಶಿಕ್ಷಕ ಅಭಿಷೇಕ್, ಮುನಿಯಪ್ಪ ಹಾಗೂ ವಾರ್ಡನ್ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ ಮೇರೆಗೆ ಪ್ರಾಂಶುಪಾಲೆ ಸೇರಿ ನಾಲ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.