ಕೋಲ್ಕತಾ: ಕಳೆದ ವಾರ ತರಬೇತಿ ವೈದ್ಯರೊಬ್ಬರು ಮೃತಪಟ್ಟ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಒಂದು ಭಾಗವನ್ನು ಗುಂಪೊಂದು ಧ್ವಂಸಗೊಳಿಸಿದ ನಂತರ ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದಾದಿಯರು ಗುರುವಾರ ಪ್ರತಿಭಟನೆ ನಡೆಸಿದರು.
ತುರ್ತು ಶಸ್ತ್ರ ಚಿಕಿತ್ಸೆ ಘಟಕದಲ್ಲಿ ವೈದ್ಯಕೀಯ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ಧ್ವಂಸ ಮಾಡಲಾಯಿತು.
31 ವರ್ಷದ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆಯ ಅಪರಾಧ ಖಂಡಿಸಿ ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ.
ವೈದ್ಯರ ಹತ್ಯೆಯನ್ನು ವಿರೋಧಿಸಿ ‘ರೀಕ್ಲೈಮ್ ದಿ ನೈಟ್’ ಅಭಿಯಾನದ ಅಡಿಯಲ್ಲಿ ಮಹಿಳೆಯರ ಗುಂಪು ಮಧ್ಯರಾತ್ರಿ ಬೀದಿಗಿಳಿದು ಆಸ್ಪತ್ರೆಯ ಆವರಣದಲ್ಲಿ ಜಮಾಯಿಸಿದಾಗ ಈ ಘಟನೆ ನಡೆದಿದೆ.