ಕೋಲ್ಕತ್ತಾ : ತರಬೇತಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಆಗಸ್ಟ್ 14 ರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದ ಬಗ್ಗೆ ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೋಲ್ಕತಾದ ಆರ್ಜಿ ಕಾರ್ ಆಸ್ಪತ್ರೆಯ ವಿಧ್ವಂಸಕ ಕೃತ್ಯದ ಪ್ರಕರಣವನ್ನು ಕೈಗೆತ್ತಿಕೊಂಡ ಕಲ್ಕತ್ತಾ ಹೈಕೋರ್ಟ್, ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ಇದು ಆಡಳಿತ ಯಂತ್ರದ ಸಂಪೂರ್ಣ ವೈಫಲ್ಯ ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ.
“ಇದು ರಾಜ್ಯ ಆಡಳಿತಯಂತ್ರದ ಸಂಪೂರ್ಣ ವೈಫಲ್ಯವಾಗಿದೆ. ಸ್ಥಳದಲ್ಲಿ ಪೊಲೀಸ್ ಪಡೆ ಇತ್ತು. ಅವರು ತಮ್ಮ ಜನರನ್ನು ರಕ್ಷಿಸಲು ಸಾಧ್ಯವಾಗಲಿಲ್ಲವೇ? ಕ್ಷಮಿಸಿ. ಈ ವೈದ್ಯರು ನಿರ್ಭೀತಿಯಿಂದ ಹೇಗೆ ಕೆಲಸ ಮಾಡುತ್ತಾರೆ?” ಎಂದು ಮುಖ್ಯ ನ್ಯಾಯಮೂರ್ತಿ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
“ನೀವು ಯಾವುದೇ ಕಾರಣಕ್ಕಾಗಿ ಸಿಆರ್ಪಿಸಿಯ ಸೆಕ್ಷನ್ 144 ಆದೇಶಗಳನ್ನು ಹೊರಡಿಸುತ್ತೀರಿ. ಇಷ್ಟೊಂದು ಗದ್ದಲ ನಡೆಯುತ್ತಿರುವಾಗ, ನೀವು ಈ ಪ್ರದೇಶವನ್ನು ಸುತ್ತುವರಿಯಬೇಕಿತ್ತು” ಎಂದು ಅವರು ಹೇಳಿದರು. ಕೋಲ್ಕತಾ ಪೊಲೀಸರ ಪ್ರಕಾರ, ಪ್ರತಿಭಟನಾಕಾರರ ವೇಷದಲ್ಲಿ ಸುಮಾರು 40 ಜನರು ಆಸ್ಪತ್ರೆಯ ಆವರಣಕ್ಕೆ ಪ್ರವೇಶಿಸಿ, ಆಸ್ತಿಪಾಸ್ತಿಗಳನ್ನು ನಾಶಪಡಿಸಿದರು ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದರು.
“7,000 ಜನ ಬಂದು ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಅಂದರೆ ಏನು ಅರ್ಥ..? ಯಾವ ವ್ಯವಸ್ಥೆ ಇದು..ಪೊಲೀಸರು ಏನು ಮಾಡುತ್ತಿದ್ದರು..? ಎಂದು ಕೋರ್ಟ್ ಛೀಮಾರಿ ಹಾಕಿದೆ. ಕೋಲ್ಕತಾ ಪೊಲೀಸರ ಪ್ರಕಾರ, ಪ್ರತಿಭಟನಾಕಾರರ ಸೋಗಿನಲ್ಲಿ ಸುಮಾರು 40 ಜನರು ಆಸ್ಪತ್ರೆಯ ಆವರಣಕ್ಕೆ ಪ್ರವೇಶಿಸಿ, ಆಸ್ತಿಪಾಸ್ತಿಗಳನ್ನು ನಾಶಪಡಿಸಿದರು ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದರು.