ಕೊಲ್ಕತ್ತಾ: ಕೋಲ್ಕತ್ತಾ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ. ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಘೋಷ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.
ಕೇಂದ್ರೀಯ ತನಿಖಾ ದಳ(ಸಿಬಿಐ) ಶನಿವಾರ ಕೋಲ್ಕತ್ತಾ ಪೊಲೀಸ್ ಎಸ್‌ಐಟಿಯಿಂದ ಆರ್‌ಜಿ ಕರ್ ಆಸ್ಪತ್ರೆಯ ಅಕ್ರಮಗಳ ಪ್ರಕರಣವನ್ನು ವಹಿಸಿಕೊಂಡಿದೆ. ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಪ್ರಕರಣ ದಾಖಲಿಸಿದೆ. ಕೊಲ್ಕತ್ತಾ ಹೈಕೋರ್ಟ್‌ನ ಏಕ ಪೀಠದ ಆದೇಶದ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಪ್ರಕರಣವನ್ನು ಕೈಗೆತ್ತಿಕೊಂಡ ಕೂಡಲೇ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳವು ಘೋಷ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಹೈಕೋರ್ಟ್‌ನ ಆದೇಶದ ಮೇರೆಗೆ ಎಸ್‌ಐಟಿ ಇಂದು ಬೆಳಗ್ಗೆ ನಿಜಾಮ್ ಪ್ಯಾಲೇಸ್‌ನಲ್ಲಿರುವ ಸಿಬಿಐ ಕಚೇರಿಗೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಹಸ್ತಾಂತರಿಸಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಸಂದೀಪ್ ಘೋಷ್ ಅವರನ್ನು ಗ್ರಿಲ್ ಮಾಡುತ್ತಿದೆ. ಇಂದು ಸತತ ಒಂಬತ್ತನೇ ದಿನವೂ ಅವರನ್ನು ವಿಚಾರಣೆ ನಡೆಸಲಾಯಿತು. ಈತನನ್ನು ಇದುವರೆಗೆ 100 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.
ಸಂದೀಪ್ ಘೋಷ್, ಪ್ರಮುಖ ಆರೋಪಿ ಸಂಜಯ್ ರಾಯ್, ರಾಯ್ ಅವರ ಆಪ್ತ ಸಹಾಯಕ ಮತ್ತು ನಾಲ್ವರು ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಇತರ ಆರು ಮಂದಿಯ ಪಾಲಿಗ್ರಾಫ್ ಪರೀಕ್ಷೆಯನ್ನು ಸಹ ಸಿಬಿಐ ನಡೆಸಿದೆ.