ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಲ್ಲಿ ನಡೆಯುವ ಸಲಾಂ ಮಂಗಳಾರತಿ ಹೆಸರನ್ನು ಬದಲಿಸುವಂತೆ ವಿಶ್ವ ಹಿಂದೂ ಪರಿಷತ್ ಸದಸ್ಯರು ಮನವಿ ಮಾಡಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಪ್ರತಿದಿನ ಟಿಪ್ಪು ಹೆಸರಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದ್ದು, ಹೆಸರು ಬದಲಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ.
ವೈರಲ್ ಆಗಿದೆ ನೀರು ಕುಡಿಯಲು ಬಂದ ಚಿರತೆ ಮೊಸಳೆಗೆ ಆಹಾರವಾದ ವಿಡಿಯೋ
ಮೂಕಾಂಬಿಕಾ ದೇವಾಲಯ ಭಾರತದ 108 ಶಕ್ತಿಪಿಠಗಳಲ್ಲಿ ಒಂದು. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಮೂಕಾಂಬಿಕಾ ತಾಯಿಯು ದುರ್ಗ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವತಾರ. ಕೋಟ್ಯಂತರ ಭಕ್ತರ ನಂಬಿಕೆಯ ಸ್ಥಳ. ಈ ಪುಣ್ಯ ಕ್ಷೇತ್ರಗಳಲ್ಲಿ ಒಬ್ಬ ಕ್ರೂರಿ, ಮತಾಂಧ, ಕನ್ನಡ ವಿರೋಧಿ ಸಾವಿರಾರು ಹಿಂದೂಗಳನ್ನು ನರಮೇಧ ಮಾಡಿದ ನೂರಾರು ದೇವಸ್ಥಾನಗಳನ್ನು ಧ್ವಂಸ ಮಾಡಿದ ಟಿಪ್ಪುವಿನ ಹೆಸರಲ್ಲಿ ಪ್ರತಿದಿನ ರಾತ್ರಿ 8 ಗಂಟೆಗೆ ಮೂಕಾಂಬಿಕಾ ದೇವಿಗೆ ಸಲಾಂ ಎಂಬ ಹೆಸರಲ್ಲಿ ಮಹಾಮಂಗಳಾರತಿ ಮಾಡುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ. ಇದು ಕೋಟ್ಯಂತರ ಹಿಂದೂ ಭಕ್ತರ ಭಾವನೆಗೆ ಘಾಸಿಯುಂಟುಮಾಡಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹೆಸರನ್ನು ಬದಲಿಸಿ ದೇವರ ಹೆಸರಲ್ಲಿ ಮಹಾಮಂಗಳಾರತಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.