alex Certify ಜೆಡಿಎಸ್ ಗೆ ಮತ್ತೊಂದು ಶಾಕ್: ಪಕ್ಷದ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಗೆ ಮತ್ತೊಂದು ಶಾಕ್: ಪಕ್ಷದ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ…?

ಬೆಂಗಳೂರು: ಉತ್ತರ ಕರ್ನಾಟಕದ ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಡಿಸೆಂಬರ್ 14ರಂದು ಕೋನರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಂದು ಹೇಳಲಾಗಿದೆ. ಕೋನರೆಡ್ಡಿ ಹಿಂದೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ವದಂತಿ ಹರಡಿತ್ತು. ಅಲ್ಲದೆ, ಅವರು ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದರು. ಪ್ರಸ್ತುತ ಬೆಳಗಾವಿ ಅಧಿವೇಶನದ ಎರಡನೇ ದಿನವಾದ ನಾಳೆ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...