ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಗಾಯಗೊಂಡ ಬಾಲಕ ಮಂಜುನಾಥ್ ನನ್ನು ಕೊಪ್ಪಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಮಾರ್ಗಮಧ್ಯೆ ಬಂಕ್ ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ರಸ್ತೆಗೆ ಬರುವಾಗ ಎದುರಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಹಾರಿ ಮುಳ್ಳಿನ ಪೊದೆಗೆ ಬಿದ್ದಿದ್ದ ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.