alex Certify BREAKING: ಮದುವೆ ದಿಬ್ಬಣದ ಬಸ್ ಪಲ್ಟಿ; 10 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮದುವೆ ದಿಬ್ಬಣದ ಬಸ್ ಪಲ್ಟಿ; 10 ಜನರಿಗೆ ಗಾಯ

ಕೊಪ್ಪಳ: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 10 ಜನ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಶಹಾಪುರ ಟೋಲ್ ಗೇಟ್ ಬಳಿ ನಡೆದಿದೆ.

ಯಾದಗಿರಿ ಜಿಲ್ಲೆಯ ದಂಡಗುಂಡ ಗ್ರಾಮದಿಂದ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಪಿ. ಅರುಣಾಂಕ್ಷುಗಿರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಮದುವೆ ಮುಗಿಸಿಕೊಂಡು ತುಮಕೂರಿನ ಸಿದ್ದರಾಮಯ್ಯನ ಪಾಳ್ಯಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...