ಕೊಪ್ಪಳ: ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ಗುಂಪು ಘರ್ಷಣೆಯಲ್ಲಿ ಬಾಷಾವಲಿ ಎಂಬಾತನನ್ನು ಹತ್ಯೆ ಮಾಡಿದ್ದ ಆರೋಪಿ ಪಂಪಾಪತಿ ನಾಯಕ್ ಪೊಲೀಸರಿಗೆ ಶರಣಾಗಿದ್ದಾನೆ. ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಏಕಾಏಕಿ ಪೊಲೀಸರಿಗೆ ಶರಣಾಗಿದ್ದಾನೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಹುಲಿಹೈದರ್ ಘರ್ಷಣೆ ಕೇಸ್ ನಲ್ಲಿ ಬಂಧಿತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಪ್ರಕರಣದ ತನಿಖೆಗಾಗಿ ಎಸ್ ಪಿ ಅರುಣಾಂಗ್ಶು ಗಿರಿ ಐದು ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.