alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ

ಕೊಪ್ಪಳ: ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳವನ್ನು ಡಿಸೆಂಬರ್ 13 ರಂದು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಕಿಂಗ್, ಫೈನಾನ್ಸಿಯಲ್ ಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳನ್ನೊಳಗೊಂಡ ಉದ್ಯೋಗದಾತರು, ಸುಮಾರು 25 ರಿಂದ 30 ಕಂಪನಿಗಳು ಭಾಗವಹಿಸಲಿದ್ದು, 1000 ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ದಾಖಲಾತಿಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ (https://docs.google.com/forms/d/e/1FAIpQLSeqmoeWqI_oi2khKcskoayche0SxPkJqqdIwySNaL0XtzI2aQ/viewform?vc=0&c=0&w=1&flr=0) ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...