alex Certify SSLC, PUC, ITI, ಪದವೀಧರರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC, ITI, ಪದವೀಧರರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶ

ಕೊಪ್ಪಳ: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.15 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 03-30 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಚಿತ್ರದುರ್ಗದ ಸೇವಾ ದೃಷ್ಟಿ ಪ್ರೈವೇಟ್ ಲಿಮಿಟೆಡ್, ಕೊಪ್ಪಳದ ಭಾರತ್ ಫೈನಾನ್ಸ್ ಪ್ರೈ.ಲಿ. ಮತ್ತು ಹುಬ್ಬಳ್ಳಿಯ ನವಭಾರತ ಫರ್ಟಿಲೈಸರ್ಸ್ ಅವರು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 20 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ.: 7676707723, 6364098202, 9154708832, 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...