alex Certify ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ

ಕೊಪ್ಪಳ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ.

ಲಕ್ಕವ್ವ ವಾಲೀಕಾರ(36) ಕೊಲೆಯಾದವರು, ನಿಂಗಪ್ಪ ವಾಲೀಕಾರ(40) ಆತ್ಮಹತ್ಯೆ ಮಾಡಿಕೊಂಡವರು. ಮದ್ಯವ್ಯಸನಿಯಾಗಿ ನಿಂಗಪ್ಪ ಅನೇಕ ಕಡೆ ಸಾಲ ಮಾಡಿಕೊಂಡಿದ್ದ. ನಿತ್ಯವೂ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಿಂಗಪ್ಪ ಬಳಿಕ ಗ್ರಾಮದ ಹೊರವಲಯದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...