alex Certify ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಕೊಪ್ಪಳ: ಆಂಬುಲೆನ್ಸ್ ನಲ್ಲಿಯೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಶಾಕಾಪುರ ಸಮೀಪ ನಡೆದಿದೆ.

38 ವರ್ಷದ ಪುಷ್ಪಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶಾಕಾಖಾಪುರ ಗ್ರಾಮದ ಪುಷ್ಪಾ ಅವರಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೊರಟಿದ್ದಾರೆ. ಆಸ್ಪತ್ರೆಗೆ ಹೋಗುವಾಗ ಮಾರ್ಗಮಧ್ಯದಲ್ಲಿ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಒಂದು ಗಂಡು, ಒಂದು ಹೆಣ್ಣು ಮಗುವಿಗೆ ಪುಷ್ಪಾ ಜನ್ಮ ನೀಡಿದ್ದು, ತಾಯಿ ಮತ್ತು ಮಕ್ಕಳಿಬ್ಬರು ಆರೋಗ್ಯವಾಗಿದ್ದಾರೆ. ಅವರನ್ನು ಕುಷ್ಟಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...