
ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದಲ್ಲಿ ಅನ್ಯಧರ್ಮೀಯರ ಅಂಗಡಿಗಳು ಇರಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಲಾಗಿದೆ.
ಗಂಗಾವತಿ ತಹಶೀಲ್ದಾರ್ ಅವರು ನೀಡಿದ ದೂರು ಆಧರಿಸಿ ಅತುಲ್ ಕುಮಾರ್ ಸಬರಲಾಲ್ ಆಲಿಯಾಸ್ ಮಧುಗಿರಿ ಮೋದಿ ವಿರುದ್ಧ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಕೇಸ್ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.