alex Certify ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿ ಅರೆಸ್ಟ್

ಕೊಪ್ಪಳ: ಶಿವಮೊಗ್ಗ ಜಿಲ್ಲೆಯಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿಯನ್ನು ಬಂಧಿಸಲಾಗಿದೆ.

ಮಾಜ್ ಮತ್ತು ಯಾಸಿನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದ ಶಬ್ಬೀರ್ ಎಂಬುವನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಆರೋಪಿ ಶಬ್ಬೀರ್ ನನ್ನು ಬಂಧಿಸಲಾಗಿದೆ.

ಶಂಕಿತ ಉಗ್ರರ ಜೊತೆಗೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಶಬ್ಬೀರ್ ನನ್ನು ಬಂಧಿಸಲಾಗಿದ್ದು, ಗಂಗಾವತಿ ಪಟ್ಟಣದಲ್ಲಿ ಡಿವೈಎಸ್ಪಿ ರುದ್ರೇಶ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದು, ತಡರಾತ್ರಿವರೆಗೂ ಪೊಲೀಸರು ವಾಹನಗಳ ತಪಾಸಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...