alex Certify SSLC, PUC, ಪದವೀಧರರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC, ಪದವೀಧರರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಅವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್-ಇಂಟರ್‌ವ್ಯೂವ್‌ನ್ನು ಮಾರ್ಚ್ 17 ರಂದು ಬೆಳಿಗ್ಗೆ 10.30 ರಿಂದ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ವಾಕ್ ಇನ್ ಇಂಟರ್‌ವ್ಯೂನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಿ, ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ ಅಥವಾ ತತ್ಸಮಾನ, ಯಾವುದೇ ಪದವಿ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಆಸಕ್ತ 18 ರಿಂದ 29 ವರ್ಷದ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...