
ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಕೊಪ್ಪಳ ತಾಲೂಕಿನ ಇರಕಲಗಡ ಗ್ರಾಮದ ನಿವಾಸಿಗಳಾಗಿದ್ದಾರೆ. ಅಮರೇಶ್ವರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.