
ಕೊಪ್ಪಳ: ಕೊಪ್ಪಳ ನಗರದ ಬಳಿ ನಿರ್ಮಾಣವಾಗುತ್ತಿರುವ ಬಲ್ಡೋಟಾ(BSPL) ಫ್ಯಾಕ್ಟರಿ ನಿರ್ಮಾಣ ವಿರೋಧಿಸಿ ಇಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ.
ಅನೇಕ ಸಂಘಟನೆಗಳು ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಿಇಒ ಶಂಕರಯ್ಯ ಕೊಪ್ಪಳ ತಾಲೂಕಿನ ಸರ್ಕಾರಿ ಶಾಲೆ ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಗವಿ ಮಠದಿಂದ ತಾಲೂಕು ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಗುವುದು. ಕೊಪ್ಪಳ ಹೊರ ವಲಯದಲ್ಲಿ ಫ್ಯಾಕ್ಟರಿ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದೆ. ಫ್ಯಾಕ್ಟರಿ ನಿರ್ಮಾಣದಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ನಗರಕ್ಕೆ ಹೊಂದಿಕೊಂಡಂತೆ ಫ್ಯಾಕ್ಟರಿ ನಿರ್ಮಾಣ ಮಾಡುವುದು ಬೇಡ ಎಂದು ಒತ್ತಾಯಿಸಲಾಗಿದೆ.