ಕೊಪ್ಪಳ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕುಕನೂರು ಗ್ರಾಮದ ಆಡೂರು ಗ್ರಾಮದ ನಿವಾಸಿ ರೇಣುಕಾ ಪ್ರಕಾಶ್ ಮೃತ ಬಾಣಂತಿ. ಹೆರಿಗೆಗಾಗಿ ನಿನ್ನೆ ರಾತ್ರಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಕುಷ್ಟಗಿ ಆಸ್ಪತೆಯಿಂದ ಕೊಪ್ಪಳ ಜಿಲ್ಲಾಸ್ಪತ್ರೆಗೆ ಶಿಫ್ಟ್ ಆಗಿದ್ದರು. ಇಂದು ಮುಂಜಾನೆ 2:30ರ ಸುಮಾರಿಗೆ ರೇಣುಕಾ ಹೆರಿಗೆಯಾಗಿದ್ದಾರೆ. ಆದರೆ ಹೆರಿಗೆಗೂ ಮುನ್ನವೇ ಶಿಶು ಮೃತಪಟ್ಟಿತ್ತು.
ಸಿಜೆರಿಯನ್ ಮೂಲಕ ವೈದ್ಯರು ಮಗುವನ್ನು ಹೊರತೆಗೆದಿದ್ದಾರೆ. ಈ ವೇಳೆ ಹೈಬಿಪಿ ಹಾಗೂ ಹೃದಯಾಘಾತದಿಂದ ಬಾಣಂತಿ ರೇಣುಕಾ ಕೂಡ ಕೊನೆಯುಸಿರೆಳೆದಿದ್ದಾರೆ.