ಕೊಪ್ಪಳ: ಮಸೀದಿ ಕಮಿಟಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಆವರಣದಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಮುಸ್ಲೀಂ ಸಮುದಾಯದ ಎರಡು ಗುಂಪುಗಳ ನಡುವೆಯೇ ಮಾರಾಮಾರಿ ನಡೆದಿದೆ.
ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.