ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವರು, ಕಾರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಸಚಿವರು ಇದ್ದ ಕಾರ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪೆಟ್ರೋಲ್ ಹಾಕಿಸಿಕೊಂಡು ತೆರಳುವಾಗ ಅಪಘಾತ ನಡೆದಿದೆ. ಕುಂಬಳಗೋಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.