ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಖಂಡಿಸಿ, ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮೌನ ಪ್ರತಿಭಟನೆ ನಡೆಸಿದರು.
ಕೋಟಾ ಶ್ರೀನಿವಾಸ್ ಪೂಜಾರಿ ಮೇಲೆ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಖಂಡಿಸಿ, ಆರೋಪವನ್ನು ವಾಪಸ್ ಪಡೆಯಬೇಕು, ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ವಿಧಾನಸೌಧದ ಗಾಂಧಿಪ್ರತಿಮೆ ಬಳಿ ಬಿಜೆಪಿ ನಯಕರು ಮೌನ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಸುರೇಶ್ ಕುಮಾರ್, ಪರಿಷತ್ ಸದಸ್ಯರು ಭಾಗವಿಹಿಸಿದ್ದರು.
ಪ್ರತಿಭಟನೆ ಬಳಿಕ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ನನ್ನ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಸಿಎಂ ಸಿದ್ದರಾಮಯ್ಯನವರೇ, ತಮಗೆ ನನ್ನ ಮೇಲೆ ಅನುಮಾನವಿದ್ದರೇ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿ ಇಲ್ಲವೇ ನೀವಾಡಿದ ಮಾತನ್ನು ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.