alex Certify ಗುಡ್ ನ್ಯೂಸ್: ವಧು, ವರರಿಗೆ ಚಿನ್ನದೊಂದಿಗೆ 15 ಸಾವಿರ ರೂ.; ‘ಸಪ್ತಪದಿ’ ಸರಳ ವಿವಾಹೋತ್ಸವ ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ವಧು, ವರರಿಗೆ ಚಿನ್ನದೊಂದಿಗೆ 15 ಸಾವಿರ ರೂ.; ‘ಸಪ್ತಪದಿ’ ಸರಳ ವಿವಾಹೋತ್ಸವ ಪುನಾರಂಭ

ಶಿವಮೊಗ್ಗ: ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಕೊರೋನಾ ಸೋಂಕಿನ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಮಹತ್ವಾಕಾಂಕ್ಷಿ ಯೋಜನೆಯನ್ನು ಪುನರಾರಂಭಗೊಳಿಸಲು ಉದ್ದೇಶಿಸಿದ್ದು, ರಾಜ್ಯದ 100 ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದಲೇ ಸರಳ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು.

ರಾಜ್ಯ ಮುಜರಾಯಿ ಮತ್ತು ದಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಶಿವಮೊಗ್ಗ ನಗರದ ಕೋಟೆ ಶ್ರೀರಾಮಾಂಜನೇಯ ದೇವಸ್ಥಾನಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು.

ಈ ಯೋಜನೆಯಡಿ ಮದುವೆಯಾಗುವ ವಧುವಿಗೆ 40,000 ರೂ. ಮೌಲ್ಯದ ಚಿನ್ನ ನೀಡಲಾಗುವುದಲ್ಲದೆ, ವಧುವಿಗೆ 10,000 ರೂ. ನಗದು ಮತ್ತು ಧಾರೆ ಸೀರೆ ಮತ್ತು ವರನಿಗೆ 5,000 ರೂ. ನಗದು ನೀಡಲಾಗುವುದು ಎಂದರು.

ಈ ಮಂಗಳ ಕಾರ್ಯಗಳಿಗೆ ಈಗಾಗಲೆ ಮುಹೂರ್ತಗಳನ್ನು ನಿಗಧಿಪಡಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಜನಸಾಮಾನ್ಯರು ಇತ್ತೀಚಿನ ದಿನಗಳಲ್ಲಿ ಆಡಂಬರದ ಮದುವೆಗಿಂತ ಸರಳ ಮದುವೆಗಳತ್ತ ಮನಸು ಮಾಡುತ್ತಿದ್ದಾರೆ. ಇದರಿಂದಾಗಿ ಕಾರ್ಯಕ್ರಮಕ್ಕೆ ಮಹತ್ವ ಹೆಚ್ಚಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...