alex Certify ಮಾನವೀಯತೆ ಮೆರೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಕಾನ್ ಸ್ಟೇಬಲ್ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾನವೀಯತೆ ಮೆರೆದಿದ್ದಾರೆ.

ಮೂಲ್ಕಿಯ ವಿಜಯ ಸನ್ನಿಧಿ ಜಂಕ್ಷನ್ ಸಮೀಪ ನಡೆದ ಅಪಘಾತದಲ್ಲಿ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ರೇಣುಕಾ ಗಾಯಗೊಂಡಿದ್ದಾರೆ. ಅದೇ ದಾರಿಯಲ್ಲಿ ತೆರಳುತ್ತಿದ್ದ ಸಚಿವ ಶ್ರೀನಿವಾಸ ಪೂಜಾರಿ ತಮ್ಮ ಕಾರಿನಲ್ಲಿ ರೇಣುಕಾ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಧ್ಯಾಹ್ನ ರೇಣುಕಾ ಊಟಕ್ಕೆ ಮನೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಗೂಡ್ಸ್ ಗಾಡಿ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಇದನ್ನು ಗಮನಿಸಿದ ಶ್ರೀನಿವಾಸ ಪೂಜಾರಿ ರೇಣುಕಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸಚಿವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...