ಮಡಿಕೇರಿ: ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಕ್ತರಿಗೆ ವಿಧಿಸಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ.
ತೀರ್ಥೋದ್ಭವ ವೀಕ್ಷಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೊರೋನಾ ನೆಗೆಟಿವ್ ವರದಿ ಮತ್ತು ಲಸಿಕೆ ಪಡೆದ ವಿವರ ಅಗತ್ಯವಿಲ್ಲ. ತಲಕಾವೇರಿಯಲ್ಲಿ ತೀರ್ಥಸ್ನಾನಕ್ಕೆ ಅವಕಾಶ ಇರುವುದಿಲ್ಲ. ಕಾವೇರಿ ತೀರ್ಥ ಕೊಂಡೊಯ್ಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾಡಳಿತದಿಂದ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಿದ್ದು, ಭಕ್ತರು ನಿಯಮಗಳನ್ನು ಪಾಲಿಸಿ ತೀರ್ಥೋದ್ಭವ ವೀಕ್ಷಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.