ಉಡುಪಿ: ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಹೈಕೋರ್ಟ್ ಮಧ್ಯಂತರ ತೀರ್ಪು ಸ್ಪಷ್ಟವಾಗಿದೆ. ಸಮವಸ್ತ್ರ ಪಾಲಿಸಬೇಕೆಂದು ಕೋರ್ಟ್ ಹೇಳಿದೆ. ಕೋರ್ಟ್ ಆದೇಶದ ಬಳಿಕ ಕೇಸರಿ ಶಾಲು ಕಾಣಿಸುತ್ತಿಲ್ಲ. ಹಿಜಾಬ್ ವಿವಾದ, ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳು ಕೆಲಸ ನಡೆದಿದೆ ಎಂದು ಆರೋಪಿಸಿದ್ದಾರೆ.