ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರೇ ಶಮಿಲಾಗಿದ್ದಾರೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿ, ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರೇ ಶಾಮೀಲಾಗಿದ್ದು, ಅವರಿಗೆ ರಜಕೀಯ ಬೆಂಬಲವೂ ಇದೆ ಎಂದು ಆರೋಪಿಸಿದ್ದಾರೆ.
ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು ಕುಮ್ಮಕ್ಕು ನೀಡಿದವರನ್ನು ಬಂಧಿಸದೇ ಬಚಾವ್ ಮಾಡಲಾಗುತ್ತಿದೆ. ಸ್ಥಳೀಯರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರೂ ದರೋಡೆ ಪ್ರಕರಣದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.