alex Certify BIG NEWS: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಸ್ಥಳ ಮಹಜರು ನಡೆಸುವ ಸಂದರ್ಭದಲ್ಲಿ ಆರೋಪಿ ಮುರುಗನ್ ಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.

ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ಮುರುಗನ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲನ್ನು ಬಚ್ಚಿಟ್ಟಿದ್ದ. ಅದನ್ನು ರಿಕವರಿ ಮಾಡಲೆಂದು ಆತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಕಾನ್ ಸ್ಟೇಬಲ್ ಮರ್ಮಾಂಗಕ್ಕೆ ಒದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಉಳ್ಳಾಲ ಇನ್ ಪೆಕ್ಟರ್ ಬಾಲಕೃಷ್ಣ ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಕಾನ್ ಸ್ಟೇಬಲ್ ಮಂಜುನಾಥ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...