alex Certify ಆಕಾಶದಲ್ಲಿ ಮೊಳಗಿದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗಾಯನ; ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ – ಪ್ರಯಾಣಿಕರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕಾಶದಲ್ಲಿ ಮೊಳಗಿದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗಾಯನ; ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ – ಪ್ರಯಾಣಿಕರು…!

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರದಿಂದ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ದೇಶ – ವಿದೇಶಗಳಿಂದಲೂ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದರ ಮಧ್ಯೆ ಸ್ಪೈಸ್ ಜೆಟ್ ವಿಮಾನದಲ್ಲಿ ವಿಮಾನ ಸಿಬ್ಬಂದಿ ಹಾಗೂ ಪ್ರಯಾಣಿಕರು, ಆಕಸ್ಮಿಕ ಚಿತ್ರದಲ್ಲಿ ವರನಟ ಡಾ. ರಾಜಕುಮಾರ್ ಅವರು ಹಾಡಿರುವ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಮೆಟ್ಟಿದರೆ ಕನ್ನಡದ ಮಣ್ಣನ್ನು ಮೆಟ್ಟಬೇಕು’ ಹಾಡನ್ನು ಹಾಡಿ ತಮ್ಮ ಕನ್ನಡಾಭಿಮಾನ ಮೆರೆದಿದ್ದಾರೆ.

ಮೊದಲಿಗೆ ವಿಮಾನದ ಸಿಬ್ಬಂದಿ ರಾಜ್ಯೋತ್ಸವ ಕುರಿತು ಮಾತನಾಡಿದ್ದು, ಬಳಿಕ ಹಂಸಲೇಖ ರಚನೆಯ ಈ ಹಾಡನ್ನು ಹಾಡಿದ್ದಾರೆ. ಇದಕ್ಕೆ ಪ್ರಯಾಣಿಕರು ಮತ್ತು ಇತರೆ ಸಿಬ್ಬಂದಿ ಧ್ವನಿಗೂಡಿಸಿದ್ದು, ಈ ವಿಡಿಯೋವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...