alex Certify ಚುನಾವಣೆ ಕೊನೆ ಕ್ಷಣದಲ್ಲಿ ಬಿಜೆಪಿಗೆ ಶಾಕ್: ಎಂಎಲ್ಸಿ ಕೆ.ಪಿ. ನಂಜುಂಡಿ ನಾಳೆ ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕೊನೆ ಕ್ಷಣದಲ್ಲಿ ಬಿಜೆಪಿಗೆ ಶಾಕ್: ಎಂಎಲ್ಸಿ ಕೆ.ಪಿ. ನಂಜುಂಡಿ ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಕ್ಷ ಸೇರ್ಪಡೆ ಕುರಿತಾಗಿ, ನಂಜುಂಡಿ ಮಾತುಕತೆ ನಡೆಸಿದ್ದಾರೆ. ಅವರ ಪಕ್ಷ ಸೇರ್ಪಡೆಗೆ ನಾಯಕರು ಒಪ್ಪಿಗೆ ನೀಡಿದ್ದು, ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ನಂಜುಂಡಿ ಅವರ ಸದಸ್ಯತ್ವ ಜೂನ್ 17ಕ್ಕೆ ಮುಕ್ತಾಯವಾಗಲಿದೆ. ಮಂಗಳವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...