ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.
ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ನನಗೆ ವಾರೆಂಟ್ ಜಾರಿಯಾಗಿದೆ. ರೈತರ ಪರ ಪ್ರತಿಭಟನೆ, ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ನಿಟ್ಟಿನಲ್ಲಿ ಕೋರ್ಟ್ ನೋಟೀಸ್ ಜಾರಿ ಮಾಡಿದೆ ಎಂದು ತಿಳಿಸಿದ್ದಾರೆ.
ವಾರೆಂಟ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಹಾಜರಾಗುತ್ತಿದ್ದು, ವಿಚಾರಣೆ ಬಳಿಕ ವಿವರ ನೀಡುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.