ಬೆಂಗಳೂರು: ಮಾಜಿ ಸಂಸದ ಹಾಗೂ ಕೆಪಿಸಿಸಿ ವಕ್ತಾರ ಆರ್. ಧ್ರುವ ನಾರಾಯಣ್ ಮತ್ತು ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಮಲಿಂಗಾರೆಡ್ಡಿ ಮತ್ತು ಧ್ರುವನಾರಾಯಣ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದು, ಇದರೊಂದಿಗೆ ಕೆಪಿಸಿಸಿಗೆ ಐವರು ಕಾರ್ಯಾಧ್ಯಕ್ಷರಾಗಿದ್ದಾರೆ.
ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.