alex Certify ನಾಳೆಯಿಂದ ‘KPCC’ ಪರೀಕ್ಷೆ : 200 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ  ‘KPCC’ ಪರೀಕ್ಷೆ : 200 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ :   ಜಿಲ್ಲೆಯಲ್ಲಿ ನ.04ರಿಂದ 05ರವರೆಗೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಭರ್ಂಧಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಅಂದು ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನ.04 ರಂದು ಮಧ್ಯಾಹ್ನ 02 ರಿಂದ 04 ರವರೆಗೆ ಹಾಗೂ ನ.05 ಬೆಳಿಗ್ಗೆ 10 ರಿಂದ ಮಧ್ಯಾಹ್ನ 11.30ರವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04 ರವರೆಗೆ ಕರ್ನಾಟಕ ಲೋಕಸೇವಾ ಪರೀಕ್ಷೆಕೆ  ಗ್ರೂಪ್ ‘ಸಿ’ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...