ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ. ಈ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಬೃಃತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿಗಳ ಪರಮಾಧಿಕಾರ ಮತ್ತು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.