ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ವಿಚಾರ ತೀವ್ರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಹತ್ವದ ಚರ್ಚೆ ನಡೆಸಿದೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ರಾಜ್ಯದಲ್ಲಿ ಎದ್ದಿರುವ ಹೆಚ್ಚುವರಿ ಡಿಸಿಎಂ ಹುದ್ದೆ, ಸಿಎಂ ಬದಲಾವಣೆ ಚರ್ಚೆ ತಣ್ಣಗಾಗಿಸುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಒಪ್ಪುವ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ನಾಯಕರು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಕೆಪಿಸಿಸಿಗೆ ಶೀಘ್ರದಲ್ಲಿ ನೂತನ ಸಾರಥಿ ನೇಮಕವಾಗುವ ಸಾಧ್ಯತೆ ಇದೆ. ಜಿಲ್ಲಾ ಹಾಗೂ ತಾಲೂಕು ಮತ್ತು ಬಿಬಿಎಂಪಿ ಚುನಾವಣೆವರೆಗೂ ಡಿ.ಕೆ.ಶಿವಕುಮಾರ್ ಅವರನ್ನು ಮುಂದುವರೆಸುವ ಬಗ್ಗೆ ಹಾಗೂ ಬಳಿಕ ಡಿ.ಕೆ.ಶಿವಕುಮಾರ್ ಒಪ್ಪುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕೆಲ ನಾಯಕರು ಕೂಡ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.