ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ.
ನ್ಯಾಯಾಲಯಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಸುದ್ದಿಗೋಷ್ಠಿ ನಡೆಸದಂತೆ ತಡೆ ನೀಡಿದ್ದು, ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಸಂಸದ ಪ್ರತಾಪ್ ಸಿಂಹ ಯಾವುದೇ ಹೇಳಿಕೆ ಕೊಟ್ಟರೂ ಅದರ ಬಗ್ಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ತಕ್ಷಣ ಹೇಳಿಕೆಗಳನ್ನು ನೀಡುತ್ತಿದ್ದರು. ಅಲ್ಲದೇ ಮೈಸೂರಿಗೆ ಹಾಗೂ ಕೊಡಗಿಗೆ ಸಂಸದರಾಗಿ ನಿಮ್ಮ ಕೊಡುಗೆಗಳೇನು? ಚರ್ಚೆಯಾಗಲಿ. ಸೋಲುವ ಭೀತಿಯಿಂದ ಹೆಸರಿನ ಅಕ್ಷರಗಳನ್ನೂ ಬದಲಿಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಕೋರ್ಟ್ ಮೊರೆ ಹೋಗಿದ್ದರು ಎನ್ನಲಾಗಿದೆ.