ಬೆಂಗಳೂರು: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್(ಕೆಪಿಸಿಎಲ್) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿದೆ.
ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಹೈಕೋರ್ಟ್ ಗೆ ಕೆಲವು ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶದವರೆಗೆ ಕೆಪಿಸಿಎಲ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರ ನೀಡುವುದಿಲ್ಲ ಎಂದು ಹೈಕೋರ್ಟ್ ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಹೇಳಿಕೆ ದಾಖಲಿಸಿದ ಹೈಕೋರ್ಟ್ ವಿಚಾರಣೆಯನ್ನು ನವೆಂಬರ್ 26ಕ್ಕೆ ನಿಗದಿಪಡಿಸಿದೆ.