ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಿದೆ.
ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಕೆಪಿಸಿಎಲ್ ಸೂಚನೆಯಂತೆ ಕಳೆದ ಸಲದಂತೆಯೇ ಪ್ರತಿ ಮೂರು ತಪ್ಪು ಉತ್ತರಕ್ಕೆ 1 ಅಂಕ ಕಡಿತಗೊಳಿಸುವ ಋಣಾತ್ಮಕ ಅಂಕ ಪದ್ಧತಿಯಂತೆ ಮೌಲ್ಯಮಾಪನ ಮಾಡಲಾಗಿದೆ.
ಹುದ್ದೆವಾರು ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ. ಅಂತಿಮ ಅಂಕಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಿದ್ದು, ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕೆಪಿಸಿಎಲ್ ಕ್ರಮ ವಹಿಸಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.