ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಏಪ್ರಿಲ್ 30 ರಂದು ನಡೆಸಿದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ 13(ಹೈ.ಕ.) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಮೇ 2 ರಂದು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.
ಅದೇ ರೀತಿ ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್(ಸಿವಿಲ್) -166(ಹೈ.ಕ.) ಮತ್ತು ಕಿರಿಯ ಇಂಜಿನಿಯರ್ ಮೆಕಾನಿಕಲ್ -3(ಹೈ.ಕ.) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಆಯೋಗದ ವೆಬ್ಸೈಟ್ http://kpsc.kar.nic.in/key answers ನಲ್ಲಿ ಪ್ರಕಟಿಸಲಾಗಿದೆ.
ಸದರಿಕೆ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಶುಲ್ಕದೊಂದಿಗೆ ಮೇ 9 ರ ಸಂಜೆ 5:30ರ ಒಳಗೆ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ ಬೆಂಗಳೂರು -1 ಇವರಿಗೆ ಲಿಖಿತ ಮನವಿಯ ಮೂಲಕ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಆಯೋಗದ ಅಂತರ್ಜಾಲ ತಾಣ http://kpsc.kar.nic.in/key answers ದಲ್ಲಿ Key Answers for the Various posts examination held on 30.04.2023 ರಲ್ಲಿ ಆನ್ಲೈನ್ ಮುಖಾಂತರವೂ ಸಹ ನಿಗದಿತ ಶುಲ್ಕವನ್ನು ಪಾವತಿಸಿ ಆಕ್ಷೇಪಣೆ ಸಲ್ಲಿಸಬಹುದು. ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.